ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿರುವ ಜನ ಸಾಮಾನ್ಯರು ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದ್ದಾರೆ, ಇಂತಹ ಕಿರುಕುಳದಿಂದ ಬೇಸತ್ತು ಕೆಲವರು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ, ಇಂತಹ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೆ ಜನವರಿ 25 ರಂದು ಅಧಿಕಾರಿಗಳ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶನಿವಾರ ಬೆಂಗಳೂರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು, ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ ಚಿರಂಜೀವಿ ಅವರು ಸೂಚಿಸಿದ್ದಾರೆ.
ಮಂಡ್ಯ, ಚಾಮರಾಜನಗರ, ಮೈಸೂರು, ಹಾವೇರಿ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿದೆ. ಕಾಟ ತಾಳಲಾರದೆ ಜನ ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.





