Friday, November 20, 2026

ಪ್ರಾಯೋಗಿಕ ಆವೃತ್ತಿ

ಹೆಣ್ಣು ಮಕ್ಕಳನ್ನು ಬೆಳೆಸಿ, ಓದಿಸಿ, ಪ್ರೋತ್ಸಾಹಿಸಿ ; ಡಾ.ಮಾರುತಿ

ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣಬೇಡಿ ಹೆಣ್ಣನ್ನು ಬೆಳೆಸಿ,ಓದಿಸಿ, ಪ್ರೋತ್ಸಾಹಿಸಿರೆಂದು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಪಿ ಮಾರುತಿ ಹೇಳಿದರು.

ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿಗೆ ಸಿಹಿ ಹಂಚಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಹೆಣ್ಣು ಎಂದರೆ ಬೇರೆ ಮನೆಯ ವಸ್ತು ಎಂಬ ಭಾವನೆಯಿಂದ ಹೊರಬಂದು ಅವರ ಬಗ್ಗೆ ಹೆಮ್ಮೆಯ ಭಾವವಿರಲಿ. ಇತ್ತಿತ್ತಲಾಗಿ ಹೆಣ್ಣಿನ ಸಂಖ್ಯೆ ಕಡಿಮೆ ಆಗುತ್ತಿದ್ದು ಇದರಿಂದ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ ಹೆಣ್ಣು ಭ್ರೂಣ ಹತ್ಯೆಯಂತಹ ಕಾರ್ಯಕ್ಕೆ ಕೈ ಹಾಕಬಾರದು ಅದು ಕಾನೂನು ರೀತ್ಯಾ ಅಪರಾಧವಾಗಿದೆ.ಕಾರಣ ಸ್ತ್ರೀ ಪುರುಷರ ಅನುಪಾತ ಸಮನಾಗಿರುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಮಾತನಾಡಿ ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸುವದು ಎಂಬ ಘೋಷ ವಾಕ್ಯದೊಂದಿಗೆ ದಿನಾಚರಣೆ ಆಚರಿಸಲಾಗುತ್ತಿದೆ ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ನಂಬುತ್ತಾರೆ ಇದು ಸರಿಯಲ್ಲ ಹಾಗಾಗೀ ನಾವೆಲ್ಲರೂ ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕು ಏಕೆಂದರೆ ತಾಯಿಯಾಗಿ,ಹೆಂಡತಿಯಾಗಿ, ಮಗಳಾಗಿ ಎಲ್ಲರ ಜೀವನದಲ್ಲಿ ಮಹತ್ತರ ಪಾತ್ರ ನಿಭಾಯಿಸುವವರೇ ಹೆಣ್ಣು ಮಕ್ಕಳು. ಹೆಣ್ಣು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಯಾವುದೇ ಲಿಂಗ ತಾರತಮ್ಯ ಮಾಡದೇ ಅವರ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಬೇಕೆಂದು ತಿಳಿಸಿದರು.

ಈ ವೇಳೆ ಮಕ್ಕಳ ತಜ್ಞೆ ಡಾ ಪಾರ್ವತಿ ವಿ, ಪಿ ಜಿ ತರಬೇತಿ ವೈದ್ಯಾಧಿಕಾರಿ ಧನುಷ್ಯ,ಶುಶ್ರೂಷಣಾಧಿಕಾರಿ ಜೂಲಿ ಚಾಕೋ,ಕುಸುಮಾ,ಪ್ರಭಾರಿ ತಾಲ್ಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ ಮಂಗಳಾ,ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ ಹಾಗೂ ಮಕ್ಕಳ ತಾಯಂದಿರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ