Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೃಷಿ ವಿ.ವಿ ಮೂಲಕ ಮಂಡ್ಯದ ಕೃಷಿಕರ ಕನಸು ನನಸಾಗಿದೆ ; ಮಂಜುನಾಥ್‌ಗೌಡ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಜಿಲ್ಲೆಯ ದಶಕಗಳ ಕನಸಾಗಿರುವ ಕೃಷಿ ವಿಶ್ವವಿದ್ಯಾಲಯಕ್ಕೆ ಅನುಮೋದನೆಗೆ ಕಾರಣಕರ್ತರಾಗಿರುವ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥ್‌ಗೌಡ ಎಸ್.ಆರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ಜಿಲ್ಲೆಯ ಮೈಷುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಗೊಳಿಸಿ, ವಿಜೃಂಭಣೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದಲ್ಲದೆ ಜಿಲ್ಲೆಯ ಕೃಷಿಕರ ಬಹುದಿನದ ಕನಸಾದ ಕೃಷಿ ವಿಶ್ವವಿದ್ಯಾಲಯವನ್ನು ನನಸು ಮಾಡುವ ಹಂತಕ್ಕೆ ತರಲು ಸಾಕಷ್ಟು ಶ್ರಮವಹಿಸಿದ್ದಾರೆ ಎಂದರು.

ಮೈಸೂರು ವಿಭಾಗದಲ್ಲಿ ಇದೇ ಮೊದಲ ಕೃಷಿ ವಿಶ್ವವಿದ್ಯಾಲಯವಾಗಲಿದ್ದು, ಸದರಿ ವಿಶ್ವವಿದ್ಯಾಲಯಕ್ಕೆ ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಹಾಸನ ಕೃಷಿ ಕಾಲೇಜು ಹಾಗೂ ಮೈಸೂರಿನ ತೋಟಗಾರಿಕೆ ಕಾಲೇಜು ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.

ಮಂಡ್ಯದಲ್ಲಿ ಪ್ರಾರಂಭವಾಗಲಿರುವ ನೂತನ ಕೃಷಿ ವಿಶ್ವವಿದ್ಯಾಲಯವು ಎಲ್ಲಾ ಸಸ್ಯಶಾಸ್ತ್ರಗಳ ಸಮನ್ವಯತೆ ಸಾಧಿಸಿ, ಜಿಲ್ಲೆಯ ಹಾಗೂ ಈ ವಿಭಾಗಕ್ಕೆ ಒಳಪಡುವ ಎಲ್ಲಾ ರೈತರಿಗೂ ನೂತನ ಅವಕಾಶಗಳನ್ನು ಕಲ್ಪಿಸುವಂತೆ ಕೆಲಸ ಮಾಡುವಂತಾಗಲಿ. ಇಂತಹ ಕೆಲಸ ಮಾಡಿದ ಕೃಷಿ ಸಚಿವರು ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವಂತಾಗಲಿ ಎಂದು ಆಶಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಂ.ನಾಗರಾಜ್, ಜಿಲ್ಲಾ ಪ್ರ.ಕಾರ್ಯದರ್ಶಿ ಚಂದ್ರಶೇಖರ್, ಉಪಾಧ್ಯಕ್ಷ ಜಿ.ಧನಂಜಯ, ಕೆ.ಜಿ.ನಾರಾಜ್, ವೆಂಕಟೇಶ್, ಪಿ.ಬಾಲಕೃಷ್ಣ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ