Wednesday, November 18, 2026

ಪ್ರಾಯೋಗಿಕ ಆವೃತ್ತಿ

ಸಾಹಿತ್ಯ ಸಮ್ಮೇಳನ ಯಶಸ್ಸಿನ ರೂವಾರಿಗಳಿಗೆ ಅಭಿನಂದನೆ : ಸುರೇಶ್‌ಕಂಠಿ

ಮಂಡ್ಯ ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ರೂವಾರಿಗಳಿಗೆ ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ, ನೆಲಯೋಗಿ ಸಮಾಜಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಸುರೇಶ್‌ಕಂಠಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭವು ಜನವರಿ 26ರ ಸಂಜೆ.6ಕ್ಕೆ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ, ಅಭಿನಂದಿತರನ್ನು ಅಭಿನಂದಿಸುವರು ಎಂದು ಹೇಳಿದರು.

ಅಭಿನಂದಿತರಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ.ರಮೇಶ್‌ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ.ಮಂಜು, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ, ಸಮ್ಮೇಳನದ ಸಂಚಾಲಕರಾಗಿದ್ದ ಡಾ.ಮೀರಾ ಶಿವಲಿಂಗಯ್ಯ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಸಂಚಾಲಕ ಕೆ.ಹೆಚ್.ಲವ, ಕಾಂಗ್ರೆಸ್ ಪರಿಶಿಷ್ಠ ಜಾತಿ ರಾಜ್ಯ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಮುಖಂಡ ಮಹದೇವು, ವೀಣಾ ಶಂಕರ್, ಶ್ರೀಧರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ