Saturday, November 21, 2026

ಪ್ರಾಯೋಗಿಕ ಆವೃತ್ತಿ

ಜ್ಞಾನ, ಆತ್ಮವಿಶ್ವಾಸದಿಂದ ಸಾಧನೆ ಮಾಡುವ ಗುರಿ ಇರಬೇಕು ; ಶೇಖ್ ತನ್ವೀರ್ ಆಸಿಫ್

ನನಗೆ ಸಿಕ್ಕಿರುವ ಜ್ಞಾನ, ದಾರಿ, ಬದುಕು ಕೊಟ್ಟಿರುವ ತಂದೆ ತಾಯಿ ಕೊಟ್ಟಿರೋನು ಸೃಷ್ಟಿಕರ್ತ, ನನ್ನಲಿರುವ ಜ್ಞಾನ, ಆತ್ಮವಿಶ್ವಾಸದಿಂದ ಸಾಧನೆ ಮಾಡುತ್ತೇನೆ ಎಂಬ ಗುರಿ ಇರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಕಿವಿಮಾತು ಹೇಳಿದರು.

ಮಂಡ್ಯ ಎಸ್.ಬಿ.ಎಜುಕೇಶನ್ ಟ್ರಸ್ಟ್ , ಮಾಂಡ್ಯವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜು, ಜ್ಞಾನ ಸಾಗರ ಕ್ಯಾಂಪಸ್ ಇವರ ವತಿಯಿಂದ ನಡೆದ 2024-25 ನೇ ಸಾಲಿನ ಕ್ರೀಡಾ ಮತ್ತು ಸಂಸ್ಕೃತಿಕ ಚಟುವಟಿಗಳ ಸಮಾರೋಪ ಸಮಾರಂಭ ಹಾಗೂ ಕಿರಿಯ ವಿದ್ಯಾರ್ಥಿಗಳಿಂದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಸ್.ಬಿ.ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ , ಶಿಕ್ಷಣ ಅಂತರಂಗದ ಸಂಸ್ಕಾರ. ಶಿಕ್ಷಣದ ಮೂಲ ಉದ್ದೇಶ ಮಾಹಿತಿಯನ್ನು ಧಾರೆ ಎರೆಯುವುದಲ್ಲ, ಬದಲಾಗಿ ಹೃದಯವನ್ನು ಬೆಳಗಿಸಿ ವ್ಯಕ್ತಿ ಮತ್ತು ವ್ಯತಿತ್ವವನ್ನು ರೂಪಿಸುವುದಾಗಿದೆ ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಂಡ್ಯ ಜಿಲ್ಲಾ ಪಂಚಾಯತಿ ಸಿಇಓ ಶೇಕ್ ತನ್ವೀರ್ ಆಸೀಫ್ ವರ್ಗಾವಣೆಗೊಂಡ ಹಿನ್ನೆಲೆ ಎಸ್.ಬಿ.ಎಜುಕೇಶನ್ ಟ್ರಸ್ಟ್ ವತಿಯಿಂದ ಅಭಿನಂದಿಸಿ ಸಲ್ಲಿಸಿ ಬೀಳ್ಕೊಡಲಾಯಿತು. ನಂತರ ಕ್ರೀಡಾ ಮತ್ತು ಸಂಸ್ಕೃತಿಕ ಚಟುವಟಿಗಳ್ಳಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಎಸ್.ಬಿ.ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರೊ.ಬಿ.ಶಿವಲಿಂಗಯ್ಯ, ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಎಂ.ಶ್ರೀನಿವಾಸ್, ಶೈಕ್ಷಣಿಕ ಪಾಲುದಾರರಾದ ಚೇತನ್ ಕೃಷ್ಣ, ಎಂ.ಆರ್.ಮಂಜು , ಮಹೇಶ್, ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ