ಜನವರಿ 30ರಂದು ಬೆಳಿಗ್ಗೆ 10 ಗಂಟೆಗೆ ಮುತ್ತೇಗೆರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ಪರಿಹರಿಸಿ ಕೊಳ್ಳಬೇಕೆಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.
ಜನರ ಮನೆ ಬಾಗಿಲಿಗೆ ಸರ್ಕಾರವನ್ನು ಕರೆತರುವಂತಹ ಕಾರ್ಯಕ್ರಮ ಇದಾಗಿದ್ದು, ನಿಮ್ಮ ಊರಿಗೆ ನಿಮ್ಮ ಶಾಸಕರು 53 ಇಲಾಖೆಗಳ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದಾರೆ. ಮುತ್ತೇಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಜನರ ಯಾವುದೇ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಬಗೆಹರಿಸಲು ಪ್ರಯತ್ನಿಸಲಾಗುವುದು.ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಕನ್ನಡಕಗಳನ್ನು ವಿತರಿಸಲಾಗುವುದು.ಈ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಶಾಸಕ ರವಿಕುಮಾರ್ ಗಣಿಗ ಮನವಿ ಮಾಡಿದ್ದಾರೆ.




