Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಾತಾವರಣದಲ್ಲಿ ವಿಷಾನಿಲ ಹೆಚ್ಚಳದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ; ಡಾ.ಕಾಂತರಾಜು

ವಾತಾವರಣದಲ್ಲಿ ವಿಷಾನಿಲ ಹೆಚ್ಚಳದಿಂದ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತಿವೆ ಆದ್ದರಿಂದ ಪರಿಸರ ಸಂರಕ್ಷಣೆಯ ಅರಿವು ಎಲ್ಲರಿಗೂ ಅಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು ಹೇಳಿದರು.

ಶ್ರೀರಂಗಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಕಾರ್ಯಕ್ರಮ ದಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಸಿರು ಮನೆ ಪರಿಣಾಮ ಕುರಿತು ಮಾಹಿತಿ ನೀಡಿ ಪರಿಸರದಲ್ಲಿ ಗಿಡಗಳನ್ನು ನೆಡುವ ಹಾಗೂ ಪಡೆಯುವಿಕೆ ಇಂಧನ ಬಳಕೆಯನ್ನು ಕಡಿಮೆಗೊಳಿಸುವ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಉಪ ಪ್ರಾಂಶುಪಾಲರಾದ ಸ್ವಪ್ನ ಮಾತನಾಡಿ, ಅರಣ್ಯ ನಮಗೆ ಶ್ವಾಸಕೋಶ ಇದ್ದಂತೆ ಅದನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಜೊತೆಗೆ ಪರಿಸರ ಕಲುಷಿತ ಆಗದಂತೆ ನೋಡಿಕೊಳ್ಳಬೇಕು ಪರಿಸರ ಸ್ವಚ್ಛತೆಯ ಬಗ್ಗೆ ಮನೆಯಿಂದಲೇ ಆರಂಭವಾಗಬೇಕೆಂದರು.

ರಸ ಪ್ರಶ್ನೆ ಕಾರ್ಯಕ್ರಮದಲ್ಲಿ 32 ವಿದ್ಯಾರ್ಥಿಗಳು ಭಾಗವಹಿಸಿದ್ದರು ಅದರಲ್ಲಿ ಥೋಶನ್ ಕೆ ವಿ (ಪ್ರಥಮ), ಐಶ್ವರ್ಯ( ದ್ವಿತೀಯ),ಹಾಗೂ ನಿಖಿಲ್ ಗೌಡ ಜಿ ಕೆ (ತೃತೀಯ) ಎಂದು ಬಹುಮಾನಗಳನ್ನು ಘೋಷಿಸಲಾಯಿತು.

ಈ ವೇಳೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಶಿಕ್ಷಕರಾದ ಶ್ರೀನಿವಾಸ್,ಚಂಪಾ, ಸರಿತಾ,ಆಲಿಯಾ,ವಿಬಿಡಿ ತಾಲೂಕು ಮೇಲ್ವಿಚಾರಕ ಶಿವಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ ಮಂಗಳ,ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಸಿ ಚಂದನ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ