Tuesday, November 24, 2026

ಪ್ರಾಯೋಗಿಕ ಆವೃತ್ತಿ

ವೈಜ್ಞಾನಿಕ ಅಸ್ತಿ ವಿಸರ್ಜನೆಗೆ ಯೋಜನೆ ರೂಪಿಸಿ : ಡಾ.ಕುಮಾರ

ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿರುವುದರಿಂದ ನದಿ ಕಲುಷಿತವಾಗುತ್ತಿದ್ದು, ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಙರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ನಗರಸಭೆ ಆಯುಕ್ತ ರಾಜಣ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ