Friday, November 20, 2026

ಪ್ರಾಯೋಗಿಕ ಆವೃತ್ತಿ

ಅನ್ನದಾನಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಚಂದ್ರಶೇಖರ್

ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಲ್ಲಿ ಭೀಮ್ ಆರ್ಮಿ ಎಂಬ ಸಂಘಟನೆ ಮಾಡಿಕೊಂಡು ಒಂದು ಪಕ್ಷದ ಪರವಾಗಿ ಮಾತನಾಡುವ ಅನ್ನದಾನಿಗೆ ಸಂವಿಧಾನ ರಕ್ಷಣೆಗೆ ಹೋರಾಡುತ್ತಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಕಾಂಗ್ರೆಸ್ ಎಸ್ಸಿ ವಿಭಾಗದ ರಾಜ್ಯ ಸಂಚಾಲಕ ಎನ್.ಆರ್.ಚಂದ್ರಶೇಖರ್ ಹೇಳಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಈಗಾಗಲೇ ಒಳಮೀಸಲಾತಿಗಾಗಿ ಎಡ ಸಮುದಾಯದ ನಾಯಕರೊಂದಿಗೆ ಚರ್ಚೆ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದೆ. ಅಲ್ಲದೇ ಆದಿಕರ್ನಾಟಕ(ಎ.ಕೆ), ಆದಿದ್ರಾವಿಡ (ಎ.ಡಿ) ಜಾತಿಗಳ ಗುರುತಿಸುವಿಕೆ ಮಾಡುವಂತೆ ಮನವಿ ಮಾಡಿದೆ. ಅದರಂತೆ ಮುಖ್ಯಮಂತ್ರಿಗಳು ಗುರುತಿಸುವ ಕೆಲಸ ಮಾಡುವುದಾಗಿ ಎಡಗೈ ಮತ್ತು ಬಲಗೈ ನಾಯಕರುಗಳಿಗೆ ಭರವಸೆ ನೀಡಿದ್ದಾರೆ ಎಂದರು.

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿದ್ದು ಬಿಜೆಪಿಯವರು, ಒಳಮೀಸಲಾತಿ ಜೀವಂತವಾಗಿದ್ದರೆ ರಾಜಕೀಯ ಓಟ್ ಬ್ಯಾಂಕ್ ಸೃಷ್ಠಿಸಿಕೊಳ್ಳುವ ಉದ್ದೇಶದಿಂದ ಅನ್ನದಾನಿ ಅವರಿಂದ ಈ ರೀತಿಯ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಖಂಡಿಸಿದರು.

ಅನ್ನದಾನಿ ಬಿಜೆಪಿ, ಜೆಡಿಎಸ್ ಪಕ್ಷಗಳ ಕೈಗೊಂಬೆಯಾಗಿ ವರ್ತಿಸುವುದನ್ನು ಬಿಟ್ಟು ಒಳ ಮೀಸಲಾತಿ ವಿಚಾರವಾಗಿ ಸಮುದಾಯದ ಪರವಾಗಿ ರಾಜಕೀಯ ಬಿಟ್ಟು ಹೋರಾಡಲು ಮುಂದಾಗಬೇಕೆಂದರು.

ಕಾಂಗ್ರೆಸ್ ಎಸ್ಸಿ ವಿಭಾಗದ ಮಂಡ್ಯ ಜಿಲ್ಲಾಧ್ಯಕ್ಷ ಶ್ರೀಧರ್ ಮಾತನಾಡಿ, ಕಾಂಗ್ರೆಸ್ ರಾಷ್ಟ್ರ ನಾಯಕ ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಹೇಳಿಕೆ ನೀಡುವ ಮೂಲಕ ಅನ್ನದಾನಿ ದೊಡ್ಡ ನಾಯಕನಾಗಬಹುದು ಎಂಬ ಭ್ರಮೆಯಲ್ಲಿದ್ದರೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಎಸ್ಸಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಚಂದಗಾಲು, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಂಭವಿ, ಕಾಂತರಾಜು, ಹಚ್.ಎಂ.ಪುಟ್ಟರಾಜು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ