ಸಮಾಜದಲ್ಲಿ ನಿಜವಾಗಿಯೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ಗ್ಯಾರಂಟಿ ಯೋಜನೆಗಳು ಅಗತ್ಯತೆ ಇದೆ ಅವರಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 4,61,463 ಜನರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ನೊಂದಣಿಯಾದ ಫಲಾನುಭವಿಗಳು, ಅಕ್ಟೋಬರ್ ಮಾಹೆಯವರೆಗೆ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದ್ದು, ನವೆಂಬರ್ ತಿಂಗಳ ಹಣ ಡಿ.ಬಿ.ಟಿ. ಮೂಲಕ ಕಳುಹಿಸಲಾಗುತ್ತಿದೆ, ಮುಂದಿನ ದಿನಗಳಲ್ಲಿ ಡಿಸೆಂಬರ್ ಮತ್ತು ಜನವರಿಯ ಹಣ ಜಮೆಯಾಗಲಿದೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯಡಿ 6 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಜಿಲ್ಲೆಯಲ್ಲಿದ್ದು ಅವರೆಲ್ಲರಿಗೂ ಸೆಪ್ಟೆಂಬರ್ ವರೆಗೂ ಹಣ ನೀಡಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ಉಳಿದ ಎಲ್ಲ ಮಾಹೆಗಳ ಹಣ ನೀಡಲಾಗುವುದು ಹಾಗೂ ಮೃತಪಟ್ಟವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಬೇಕು ಎಲ್ಲಾ ಕಡೆ ವೃದ್ಧರ ಕೈ ಗುರುತುಗಳನ್ನು ಸರಿಯಾಗಿ ಸ್ಕ್ಯಾನ್ ಮಾಡಲು ಸಾಧ್ಯವಾಗುತ್ತಿಲ್ಲ ಅದಕ್ಕೆ ಪರ್ಯಾಯ ಮಾರ್ಗ ಗುರುತಿಸು ವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಜಿಲ್ಲೆಯಲ್ಲಿ 10.83 ಕೋಟಿ ಮಹಿಳಾ ಪ್ರಯಾಣಿಕರ ಈವರೆಗೆ ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದಾರೆ, 274.06 ಕೋಟಿ ಸಾರಿಗೆ ಆದಾಯ ದಾಖಲಿಸಿದೆ, ಬಸ್ ಸಮಸ್ಯೆ ಬಗೆಹರಿಸಲು ಮುಂದಿನ ದಿನಗಳಲ್ಲಿ ಹೊಸ ಬಸ್ ಗಳನ್ನು ಸರ್ಕಾರ ನೀಡಲಿದೆ ಎಂದರು.
ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ನೊಂದಣಿಯಾಗಿದ್ದು ಶೇಕಡಾ 97% ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯನ್ನು ಬಳಸಿಕೊಳ್ಳುತ್ತಿದ್ದಾರೆ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಇದು ಕಡಿಮೆ ಪ್ರಮಾಣ ಹಾಗಾಗಿ ಯೋಜನೆಗಳನ್ನು ಶೇ 100% ತಲುಪಿಸುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು ನೀಡಿದರು.
4,470 ಜನ ಯುವನಿಧಿ ಯೋಜನೆಯಡಿ ನೋಂದಣಿಯಾಗಿದ್ದು 3,726 ಅಭ್ಯರ್ಥಿಗಳಿಗೆ ಈಗಾಗಲೇ ಹಣ ವರ್ಗಾವಣೆ ಆಗಿರುತ್ತದೆ, ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಬಗ್ಗೆ ಅರಿವು ಮೂಡಿಸಬೇಕು, ಪ್ರತಿ ತಾಲೂಕಿನ ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೊಂದಿಗೆ ಕಾಲೇಜುಗಳಿಗೆ ಭೇಟಿ ನೀಡಿ ಯುವನಿಧಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ರೂಪಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ ಬಾಬು, ಅಜಯ್ ಕುಮಾರ್ ಇನ್ನಿತರ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು




