Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮೈಕ್ರೋ ಫೈನಾನ್ಸ್ ಕಿರುಕುಳ| ತಾಯಿ ಸಾವಿನ ಬೆನ್ನಲ್ಲೇ ಮಗನೂ ಕೆರೆಗೆ ಹಾರಿ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳದಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಮಗನೂ ಕೂಡ ಕೆರೆ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೆಳಕಿಗೆ ಬಂದಿದೆ.

ಕೊನ್ನಾಪುರ ಗ್ರಾಮದ ಅಂದಾನಯ್ಯ ಅವರ ಪುತ್ರ ಕೆ.ಎ.ರಂಜಿತ್ (30) ಮೃತಪಟ್ಟ ಯುವಕ.

ಸಾಲದ ಕಂತುಗಳನ್ನು ಪಾವತಿಸಿಲ್ಲ ಎಂದು ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಯವರು ಇತ್ತೀಚೆಗೆ ರಂಜಿತ್ ಅವರ ಮನೆಯನ್ನು ಜಪ್ತಿ ಮಾಡಿದ್ದರು. ಇದರಿಂದಾಗಿ ಮನನೊಂದಿದ್ದ ತಾಯಿ ಜ.27 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರ ತಿಳಿದ ಪುತ್ರ ಅಂದಿನಿಂದಲೂ ನಾಪತ್ತೆಯಾಗಿದ್ದರು. ಆದರೆ ಆತನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂಬುದು ಇದೀಗ ಬೆಳಕಿಗೆ ಬಂದಿದೆ.

ರಂಜಿತ್ ಗಾಗಿ ಸಂಬಂಧಿಕರ ಮನೆಗಳಲ್ಲೂ ಹುಡುಕಾಟ ಮಾಡಿದ ಕುಟುಂಬದ ಸದಸ್ಯರು ಹುಡಕಾಟ ನಡೆಸಿದ್ದರು. ಆದರೆ ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ ಪ್ರೇಮಾ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಆದರೆ ಇಂದು ಶನಿವಾರ ಬೆಳಿಗ್ಗೆ ಹಲಗೂರು ಕೆರೆಯಲ್ಲಿ ರಂಜಿತ್ ಮೃತದೇಹ ಪತ್ತೆಯಾಗಿದೆ. ಪ್ರೇಮಾ ಜೊತೆಗೆ ರಂಜಿತ್ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ