Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೇಂದ್ರ ಬಜೆಟ್ | ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ; ಸಿಎಂ ಸಿದ್ದರಾಮಯ್ಯ

ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ. ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ಇದು ರೈತ ಸಮುದಾಯಕ್ಕೆ ಬಗೆದ ಅತ್ಯಂತ ದೊಡ್ಡ ದ್ರೋಹವಾಗಿದೆ ಎಂದು ಸಿಎಂ ವ್ಯಾಖ್ಯಾನಿಸಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ, ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ? ಎಂದು ಒತ್ತಾಯಿಸಿದ್ದಾರೆ.

ಆಂಧ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ, ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ, ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರಾಗಿದ್ದಾರೆ. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಸಿಎಂ ವಿಶ್ಲೇಷಣೆ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ