Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗಾರ್ಮೇಂಟ್ಸ್ ಗಳಿಗೆ ಶಾಸಕ ರವಿಕುಮಾರ್ ಭೇಟಿ ; ಪರಿಶೀಲನೆ

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಹಾಗೂ ಜಿಲ್ಲಾಧಿಕಾರಿ ಡಾ ಕುಮಾರ ಅವರು ಶನಿವಾರ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಯಿ ಎಕ್ಸ್ ಪೋಟ್೯ ಹಾಗೂ ಇನ್ನಿತರೆ ಗಾರ್ಮೆಂಟ್ಸ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹಳಷ್ಟು ಮಹಿಳೆಯರು ಕೆಲಸಕ್ಕಾಗಿ ಗೂಡ್ಸ್ ಅಟೋಗಳಲ್ಲಿ ತೆರಳುತ್ತಿದ್ದು, ಇದು ನಿಯಮ ಬಾಹಿರವಾಗಿರುತ್ತದೆ. ಯಾವುದಾದರೂ ಅಪಘಾತವಾದಲ್ಲಿ ವಿಮೆ ಹಣ ಕೂಡ ಸಿಗುವುದಿಲ್ಲ. ಇದರ ಬಗ್ಗೆ ಇಂದು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಜಾಗೃತಿ ಮೂಡಿಸಿದರು.

ಮಂಡ್ಯ ಬಸ್ ನಿಲ್ದಾಣದಿಂದ ನೌಕರರು ತೆರಳಲು ಅನುಕೂಲವಾಗುವಂತೆ ಕೆ‌.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಚಾಲನೆ ಸಹ ನೀಡಲಾಯಿತು‌. ವಿವಿಧ ಕೈಗಾರಿಕೆ ಹಾಗೂ ಗಾರ್ಮೆಂಟ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರೊಂದಿಗೆ ಚರ್ಚಿಸಿ ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮಹಿಳೆಯರಿಗೆ ಭದ್ರತೆ, ಸರಿಯಾದ ಸಮಯಕ್ಕೆ ಸಂಬಳ ಮತ್ತು ಪಿಎಫ್ ದೊರೆಯುತ್ತಿದೆಯೇ ಎಂಬ ಮಾಹಿತಿ ಪಡೆದುಕೊಂಡರು.

ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ಹೆರಿಗೆ ರಜೆ ಹಾಗೂ ಅವರಿಗೆ ಪುಟ್ಟ ಮಕ್ಕಳು ಇದ್ದಲ್ಲಿ ಅಂಗನವಾಡಿ ವ್ಯವಸ್ಥೆ ಇರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕೆ.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಕ ನಾಗರಾಜ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ