Tuesday, November 24, 2026

ಪ್ರಾಯೋಗಿಕ ಆವೃತ್ತಿ

‘ಡೆಡ್ ಹಾರ್ಸ್’ ಎಂದವರಿಗೆ ಮನ್ಮುಲ್ ಚುನಾವಣೆಯಲ್ಲಿ ಉತ್ತರ ಸಿಕ್ಕಿದೆ ; ಗಂಗಾಧರ್

ಜೆಡಿಎಸ್ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನಮ್ಮ ನಾಯಕರ ವಿರುದ್ಧ ‘ಡೆಡ್ ಹಾರ್ಸ್’, ‘ಜಸ್ಟ್ ಪಾಸ್’ ನಂತಹ ಹೇಳಿಕೆ ನೀಡಿ ಟೀಕಿಸಿದ್ದರು, ಅವರಿಗೆ ನಿನ್ನೆ ನಡೆದ ಮನ್ಮುಲ್ ಚುನಾವಣೆಯಲ್ಲಿ ಸಹಕಾರ ಬಂಧುಗಳು ತಕ್ಕಉತ್ತರ ನೀಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷರೂ ಆದ್ರ ಸಿ.ಡಿ.ಗಂಗಾಧರ್ ತಿರುಗೇಟು ನೀಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮನ್‌ಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಹೆಚ್ಚಿನ ಮಟ್ಟದ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅವರ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.

ಲೋಕಸಭಾ ಚುನಾವಣೆಯ ನಂತರದ ನಡೆದ ಜಿಲ್ಲಾ ಮಟ್ಟದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ, ಮೈಷುಗರ್‌ಗೆ ಆರ್ಥಿಕ ಶಕ್ತಿ ನೀಡಿದ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್ಸಿ ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ವಿಜಯ್ ಕುಮಾರ್, ನಾಗರಾಜ್, ಉದಯ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರುದ್ರಪ್ಪ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ