ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್ ಅವರು ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಫೆಬ್ರವರಿ 4 ರಂದು ಬೆಳಗ್ಗೆ 10 ಗಂಟೆಗೆ ನಾಗಮಂಗಲ, ಮಧ್ಯಾಹ್ನ 12.30 ಗಂಟೆಗೆ ಮದ್ದೂರು, 3 ಗಂಟೆಗೆ ಮಳವಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಫೆಬ್ರವರಿ 5 ರಂದು ಬೆಳಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣ, ಮಧ್ಯಾಹ್ನ 12 ಗಂಟೆಗೆ ಪಾಂಡವಪುರ ಮತ್ತು ಮಧ್ಯಾಹ್ನ 2.30 ಗಂಟೆಗೆ ಕೆ. ಆರ್.ಪೇಟೆಯಲ್ಲಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕುವಾರು ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಗೂ ಗ್ರಾಮ ಪಂಚಾಯತ್ಗಳ ಪಂಜಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ದಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




