Wednesday, November 18, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಲಾಳನಕೆರೆ ಗ್ರಾ.ಪಂ. ಅಧ್ಯಕ್ಷರಾಗಿ ಮಂಜೇಶ್ ಆಯ್ಕೆ

ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಲಾಳನಕೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಅಣೆಚನ್ನಾಪುರ ಮಂಜೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಸತೀಶ್ ಘೋಷಣೆ ಮಾಡಿದರು.

ಇತ್ತೀಚೆಗೆಷ್ಟೇ 11 ಜನ ಸದಸ್ಯರು ಈ ಹಿಂದೆ ಅಧ್ಯಕ್ಷರಾಗಿದ್ದ ಬಿ.ಜೆ ಜಯಕುಮಾರ್ ರವರನ್ನು ಅವಿಶ್ವಾಸ ನಿರ್ಣಯದ ಮೂಲಕ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದರು.

ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 11 ಜನ ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸಿ ಅವಿರೋಧವಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮತ್ತು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರ ಬೆಂಬಲಿತ ಅಭ್ಯರ್ಥಿ ಮಂಜೇಶ್ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದರು

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಮಂಜೇಶ್ ಮಾತನಾಡಿ, ನನ್ನನ್ನು ಆಯ್ಕೆ ಮಾಡಿದ ಕಾಂಗ್ರೆಸ್ ಪಕ್ಷದ ನಾಯಕರಾದ ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಮಾಜಿ ಸಂಸದ ಎಲ್ಲಾ ಶಿವರಾಮೇಗೌಡರಿಗೆ ನನ್ನ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ, ನನಗೆ ಸಹಕಾರ ನೀಡಿದ ನನ್ನ ಎಲ್ಲಾ ಸಹಮಿತ್ರ ಸದಸ್ಯರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಸಂಸದ ಶಿವರಾಮೇಗೌಡರ ಸುಪುತ್ರ ಎಲ್ ಎಸ್ ಚೇತನ್ ಗೌಡ, ನೂತನ ಅಧ್ಯಕ್ಷರಿಗೆ ಶುಭ ಕೋರಿ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳ್ಳೆಯ ಕೆಲಸಗಳನ್ನು ನಿರ್ವಹಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತುರುಬನಹಳ್ಳಿ ರಾಜೇಗೌಡ, ದಿನೇಶ್, ಎನ್.ಟಿ ಕೃಷ್ಣಮೂರ್ತಿ, ಟಿ ಎಸ್ ಪ್ರಕಾಶಗೌಡ, ಮನೋಜ್, ಚಾಕೇನಹಳ್ಳಿ ಸುರೇಂದ್ರ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ