ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.

ನರೇಂದ್ರ ಸ್ವಾಮಿ ಅವರು,ಬುಧವಾರ ರಾತ್ರಿ 9 ಗಂಟೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಫೆ.5ರಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್. ಪ್ರವೀಣ್ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಹೊರಡಿಸಿದ್ದರು.
ಈ ಅಧಿಸೂಚನೆ ಹೊರಡಿಸಲಾದ ತಕ್ಷಣದಿಂದ ಆದೇಶ ಜಾರಿಯಾಗಲಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ ಅವಧಿ ಇರಲಿದೆ.
ಚಲುವರಾಯಸ್ವಾಮಿ ಅಭಿನಂದನೆ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷರಾಗಿ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕ ಕದಲೂರು ಉದಯ್,ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ಉಪಸ್ಥಿತರಿದ್ದು,ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು.




