Friday, November 20, 2026

ಪ್ರಾಯೋಗಿಕ ಆವೃತ್ತಿ

ರೈತರ ಹೊಲಗಳಿಗೆ ಸ್ಪಿಂಕ್ಲ‌ರ್ ಸೆಟ್, ಹನಿ ನೀರಾವರಿ ಘಟಕ ಅಳವಡಿಕೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2024-25 ನೇ ಸಾಲಿನಲ್ಲಿ  ರೈತರಿಗೆ ಕೃಷಿ ಇಲಾಖೆಯ ಮುಖಾಂತರ ಸ್ಪಿಂಕ್ಲರ್ ಸೆಟ್/ಹನಿ ನೀರಾವರಿ ಘಟಕ ಅಳವಡಿಸಲು ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಶೇ. 90 ಸಹಾಯಧನ ನೀಡಲಾಗುತ್ತಿದೆ.

ಜಾಹೀರಾತು

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡಿನ ಜೆರಾಕ್ಸ್ ಪ್ರತಿ, ಪಹಣಿ, ಬ್ಯಾಂಕ್ ಪುಸ್ತಕದ ಜೆರಾಕ್ಸ್, ಸ್ಟಾಂಪ್ ಅಳತೆ 2 ಭಾವಚಿತ್ರ, ಸಲ್ಲಿಸುವುದರ ಮೂಲಕ ಯೋಜನೆಯಡಿ ಫಲಾನುಭವಿಯಾಗಬಹುದು ಎಂದು ಮಂಡ್ಯ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರಾದ ಸುನೀತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಒಂದು ಎಕರೆ ಜಮೀನಿಗಿಂತ ಹೆಚ್ಚು ವಿಸ್ತೀರ್ಣದ ಜಮೀನು ಹೊಂದಿರುವವರಿಗೆ ರೂ. 4667/- ರೈತರ ವಂತಿಕೆ ಪಾವತಿಸುವುದರ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪಿಂಕ್ಲರ್ ಜೆಟ್, ಇತರೆ ಸಾಮಗ್ರಿಗಳನ್ನು ಪಡೆಯಬಹುದು. ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ. 2496/- ಪಾವತಿಸುವುದರ ಮೂಲಕ 2 ಇಂಚು ವ್ಯಾಸವುಳ್ಳ 18 ಪೈಪುಗಳು 3 ನಂ. ಜೆಟ್ ಹಾಗೂ ಇತರೆ ಸಾಮಗ್ರಿಗಳನ್ನು ಪಡೆದುಕೊಂಡು ನೀರಿನ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗಳಿಗೆ ತುಂತುರು ನೀರಾವರಿ ಘಟಕದ ಮೂಲಕ ನೀರು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯಬಹುದಾಗಿರುತ್ತದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ