ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅವರು ಇಂದು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಾರ್ಯಾರಂಭ ಮಾಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಬೆಂಬಲಿಗರು ಆಗಮಿಸಿ ನರೇಂದ್ರಸ್ವಾಮಿ ಅವರಿಗೆ ಶುಭ ಕೋರಿದರು.

ಗೃಹ ಸಚಿವ ಜಿ.ಪರಮೇಶ್ವರ್ ಅವರು ಆಗಮಿಸಿ ನರೇಂದ್ರಸ್ವಾಮಿ ಅವರಿಗೆ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಣಿಗ ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್,ಡಾ.ರಾಮ ಮನೋಹರ ಲೋಹಿಯಾ ಟ್ರಸ್ಟ್ ಅಧ್ಯಕ್ಷ ದಡದಪುರ ಶಿವಣ್ಣ,ಚೆಸ್ಕಾಂ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ,ಡಿಸಿಸಿ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ, ಮಂಡ್ಯ ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜ್,ಕಾಂಗ್ರೆಸ್ ಮುಖಂಡರಾದ ಪ್ರದೀಪ್ ಮತ್ತಿತರ ಗಣ್ಯರು ನರೇಂದ್ರಸ್ವಾಮಿ ಅವರಿಗೆ ಶುಭ ಕೋರಿದರು.




