ಯುವಕನೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಮುಸ್ಲಿಂ ಸಮುದಾಯದ ವಿರುದ್ದವಾಗಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದರಿಂದ, ಕೂಡಲೇ ಅರೋಪಿಯನ್ನು ಬಂಧಿಸಿವಂತೆ ಆಗ್ರಹಿಸಿ ಒಂದು ಸಮುದಾಯ ಜನರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುತ್ತಿರುವಂತೆ, ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಿದ್ದಾರೆ. ಮೈ ತುಂಬಾ ಅರೇಬಿಕ್ ಬರಹಗಳನ್ನು ಹಾಕಿದ್ದು, ಅದಕ್ಕೆ ತ್ರೀ ಈಡಿಯೆಟ್ಸ್ ಎಂಬ ಶೀರ್ಷಿಕೆ ನೀಡಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಲಾಗಿದೆ.
As alleged derogatory post against a community was shared on SM, protest was staged by 1000s of people infront of Udayagiri Police Station in Mysuru last night… Police filed suo motto case & arrested accused… Enraged mob pelted stones at police station, vehicles & property… pic.twitter.com/Jg17rS2rSi
— Sathish Kumar (@satishDHmdy) February 11, 2025
“>
ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿ ಸುರೇಶ್ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ರಾತ್ರಿ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.
ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸುರೇಶ್ ಎಂಬುವವನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯ ಠಾಣಾಧಿಕಾರಿರವರು ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಿರುತ್ತಾರೆ. pic.twitter.com/r78anaBqgY
— Commissioner of Police Mysuru (@CPMysuru) February 10, 2025
“>
ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತೋ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ. ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರ ರಸ್ತೆ ಬಂದ್ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.




