ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಹೇಳುವಂತೆ ಪ್ರತಿಯೊಬ್ಬರು ಗೌರವ, ಘನತೆಯಿಂದ ಬಾಳುವಂತೆ ಮಾಡುವುದೇ ಶಿಕ್ಷಣ ಎಂದು ಡಾ.ಮೀರಾ ಶಿವಲಿಂಗಯ್ಯ ಹೇಳಿದರು.
ಮಂಡ್ಯದ ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇವರ ವತಿಯಿಂದ ನಡೆದ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ತಿಳಿವು ಅರಿವುದೊಂದು ಸಂತಸ, ತಿಳಿ ನೀರ ಚಿಲುಮೆ ಉಕ್ಕುವಂತೆ, ಹೊಸ ತಳಿರು ಪಡೆದು ಗಿಡ ನಳನಳಿಸುವಂತೆ ಎಂದು ಕವಿಗಳು ಬಣ್ಣಿಸಿದ್ದಾರೆ. ಪ್ರೌಢ ಶಿಕ್ಷಣ ಮಕ್ಕಳು ಬಹಳಷ್ಟನ್ನು ಕಲಿಯವಂತಹ ಹಂತವಾಗಿದೆ. ಮಕ್ಕಳಿಗೆ ಧರ್ಮ ಸಹಿಷ್ಣುತೆ, ಸಾಹಸಗುಣ, ಸಹಭಾಗಿತ್ವದ ಗುಣವನ್ನು ಕಲಿಸಬೇಕೆಂದು ತಿಳಿಸಿದರು.

ಎಸ್.ಬಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಬಿ ಶಿವಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲ ಕೆ.ಕೆ. ಚಂದ್ರಶೇಖರ್ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷ ಎಂ.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.
ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.




