ಶ್ರೀರಂಗಪಟ್ಟಣದ ತಾಲ್ಲೂಕು ಪಂಚಾಯತಿ ಕಛೇರಿ ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ 100 ದಿನಗಳ ಅಭಿಯಾನದ ಅಂಗವಾಗಿ ಪಂಚಾಯತಿ ಕಾರ್ಯಾಲಯದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕ್ಷಯರೋಗದ ಬಗ್ಗೆ ಅರಿವು ಹಾಗೂ ತಪಾಸಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಮಾತನಾಡಿ, ಕ್ಷಯರೋಗದ ಲಕ್ಷಣಗಳು,ಹ ರಡುವ ವಿಧಾನ,ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಹಾಗೂ 100 ದಿನಗಳ ಅಭಿಯಾನದ ಉದ್ದೇಶ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಕ್ಷಯ ರೋಗದ ಬಗ್ಗೆ ಜಾಗೃತಿ ಹಾಗೂ ತಪಾಸಣೆ ನಡೆಸಲಾಗುತ್ತಿದೆ ಅದಕ್ಕಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಒಟ್ಟಾರೆ 2025 ರ ಒಳಗೆ ಕ್ಷಯಮುಕ್ತ ಮಂಡ್ಯ ಜಿಲ್ಲೆಗಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಬಿ ಹೇಮಣ್ಣ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ವೇಳೆ ತಾ ಪಂ ಯೋಜನಾಧಿಕಾರಿ ತ್ರಿವೇಣಿ ಎಂ ಎಂ,ಲೆಕ್ಕ ಸಹಾಯಕ ಅಧಿಕಾರಿ ಪವಿತ್ರ ಎಸ್,ಮ್ಯಾನೇಜರ್ ದಿವ್ಯ,ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ ಮಂಗಳ,ಆರೋಗ್ಯ ನಿರೀಕ್ಷಣಾಧಿಕಾರಿ ಪಣಿಂದ್ರ ಹಾಗೂ ತಾ ಪಂ ಕಾರ್ಯಾಲಯದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.




