Friday, November 20, 2026

ಪ್ರಾಯೋಗಿಕ ಆವೃತ್ತಿ

ಹೊರಗುತ್ತಿಗೆ ನೌಕರನ ವಜಾ ಆದೇಶ ರದ್ದತಿಗೆ ಒತ್ತಾಯ

ಮದ್ದೂರು ಪುರಸಭೆಯ ಹೊ ಗುತ್ತಿಗೆ ನೌಕರ ಮನೀಷ್ ಮಾಡಿದ ಸಣ್ಣತಪ್ಪಿಗಾಗಿ ಸೇವೆಯಿಂದ ವಜಾಗೊಳಿಸಿರುವುದನ್ನು ಖಂಡಿಸಿ ಮದ್ದೂರಿನಲ್ಲಿ ಫೆ.3ರಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಮದ್ದೂರು ಪುರಸಭೆಯ ಆಡಳಿತ ಮಂಡಳಿ ಹಾಗೂ ಮದ್ದೂರು ಶಾಸಕರು ವಜಾ ಆದೇಶವನ್ನು ತೆರವುಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಅಂದಾನಿ ಸೋಮನಹಳ್ಳಿ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರು ಶಾಸಕರ ಕಛೇರಿಯನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ ಸಂಬಂಧ ದೂರು ದಾಖಲಿಸಿರುವುದಕ್ಕೆ ಪುರಸಭೆ ಆಡಳಿತ ಮಂಡಳಿ ಗುತ್ತಿಗೆದಾರ ಸಂಸ್ಥೆಗೆ ಪತ್ರ ಬರೆದು ಸೇವೆಯಿಂದ ವಜಾ ಮಾಡಿದ್ದು, ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸುವಂತೆ ಮನವಿ ಮಾಡಿದರು.

ಇತ್ತೀಚೆಗೆ ಮದ್ದೂರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕರು, ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದು, ಅವರು ತಮ್ಮ ಹೇಳಿಕೆಯನ್ನು ಸಾಬೀತು ಮಾಡಿದರೆ, ಹೋರಾಟ ಜೀವನದಿಂದ ಹೊರಗುಳಿಯುವುದಾಗಿ ಹೇಳಿದರು.

ಗೋಷ್ಠಿಯಲ್ಲಿ ಎಂ.ವಿ.ಕೃಷ್ಣ, ಲಕ್ಷ್ಮಣ್ ಚೀರನಹಳ್ಳಿ, ಮೂರ್ತಿ ಚಿಕ್ಕರಸಿನಕೆರೆ, ಉಮೇಶ್ ಹಾಗೂ ಶಿವು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ