ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಕೆ.ಆರ್ ಪೇಟೆ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು. ದೂರುಗಳನ್ನು ಪರಿಶೀಲಿಸಿ ಕ್ರಮಬದ್ಧವಾಗಿ ಪರಿಹರಿಸುವಂತೆ ತಹಶೀಲ್ದಾರ್ ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಹಾಗೂ ಕಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಮುಷ್ಕರನಿರತ ಗ್ರಾಮ ಲೆಕ್ಕಾಧಿಕಾರಿಗಳಿಂದ ಮನವಿ ಸ್ವೀಕರಿಸಿದರು.
ತಾಲ್ಲೂಕು ಕಚೇರಿಯಲ್ಲಿ ಸಭೆ ನಡೆಸಿ ಸಿಬ್ಬಂದಿಗಳಿಂದ ಕಡತ ವಿಲೇವಾರಿ ಕುರಿತು ಮಾಹಿತಿ ಪಡೆದುಕೊಂಡರು. ಕಂದಾಯ ಇಲಾಖೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಕೆಲಸಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುವುದು ಕಂಡುಬಂದಲ್ಲಿ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು.




