Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ; ಕಾನೂನು ಕ್ರಮಕ್ಕೆ ಆಗ್ರಹ

ಮಂಡ್ಯದಲ್ಲಿ ಒನ್ ಇಂಡಿಯಾ ಚಾನಲ್ ವರದಿಗಾರ ಜಯಕುಮಾರ್ ಮೇಲೆ ದುಷ್ಕರ್ಮಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕೃತ್ಯವನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದ್ದು, ಈ ಕೃತ್ಯವೆಸಗಿದವರ ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಒತ್ತಾಯಿಸಿದೆ.

ಸಂಘದ ಅಧ್ಯಕ್ಷ ಕೆ.ಎನ್.ನವೀನ್ ಕುಮಾರ್ ನೇತೃತ್ವದಲ್ಲಿ ಇಂದು ಎಸ್ಪಿಯವರಿಗೆ ಮನವಿ ಸಲ್ಲಿಸಲಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗಕ್ಕೆ ಜನಸಾಮಾನ್ಯರು ವಿಶೇಷ ಮನ್ನಣೆ ನೀಡಿದ್ದು, ಸಮಾಜದ ಎಲ್ಲಾ ಸ್ತರದ ಜನರ ದನಿಯಾಗಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಸವಾಲುಗಳು ಎದುರಾಗುತ್ತವೆ. ಆದರೆ ವ ರದಿಗಾರನ ಕೊಲೆಗೆ ಯತ್ನಿಸಿರುವುದು ಪತ್ರಿಕಾ ಸ್ವಾತಂತ್ರವನ್ನು ದಮನ ಮಾಡುವ ದುಷ್ಕೃತ್ಯವಾಗಿದೆ. ಇದು
ನಾಗರಿಕ ಸಮಾಜ ತಲೆತಗ್ಗಿಸುವ ಇಂತಹ ಜೀವ ವಿರೋಧಿ ದುಷ್ಕೃತ್ಯವಾಗಿದೆ. ಆದ್ದರಿಂದ ಪೊಲೀಸ್ ಇಲಾಖೆ ತುರ್ತು ಕ್ರಮ ವಹಿಸಬೇಕಾಗಿದೆ ಎಂದು ಮನವಿ ಮಾಡಿದರು.

ಯೂಟ್ಯೂಬ್ ವರದಿಗಾರನ ಕೊಲೆ ಯತ್ನ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಸಮರ್ಥ ಪೊಲೀಸ್ ತಂಡ ರಚಿಸಿ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಮತ್ತು ಅವರ ಕುಟುಂಬ ವರ್ಗಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಪತ್ರಕರ್ತರಾದ ನವೀನ್ ಚಿಕ್ಕಮಂಡ್ಯ, ನಂಜುಂಡಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ