Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ‘ಬಡವರ ಭಾಗ್ಯವಿಧಾತ’ ಪುಸ್ತಕ ಬಿಡುಗಡೆ

ಜನಪರ ಗ್ಯಾರಂಟಿಗಳ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮತ್ತು ಗ್ಯಾರಂಟಿ ಯೋಜನೆಗಳ ಕುರಿತ ಆರ್ಥಿಕ ವಿಶ್ಲೇಷಣೆ ಒಳಗೊಂಡ ಕೊತ್ತತ್ತಿ ಯತೀಶ ಬಾಬು ಬರೆದಿರುವ ‘ಬಡವರ ಭಾಗ್ಯವಿಧಾತ’ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಾಳೆ (ಫೆ.18) ಬೆಳಿಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ, ಶಾಸಕರಾದ ರವಿಕುಮಾರ್ ಗೌಡ(ಗಣಿಗ), ಕೆ.ಎಂ ಉದಯ್, ಮುಡಾ ಅಧ್ಯಕ್ಷ ನಹೀಮ್ ಸಾಮೂಹಿಕವಾಗಿ ಪುಸ್ತಕ ಬಿಡುಗಡೆ ಮಾಡುವರು. ಪುಸ್ತಕ ಕುರಿತು ರಾಜಕೀಯ ವಿಶ್ಲೇಷಕ, ಹಿರಿಯ ಪತ್ರಕರ್ತ ಧರಣೀಶ್ ಬೂಕನಕೆರೆ ಮಾತನಾಡುವರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ