ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಫೆಬ್ರವರಿ 18 ಮತ್ತು 19 ರಂದು ಮಂಡ್ಯ ಜಿಲ್ಲೆಯಲ್ಲಿ 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ.
ಫೆಬ್ರವರಿ 18 ರಂದು ಬೆಳಗ್ಗೆ 9:30 ಗಂಟೆಗೆ ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಅಲುಮ್ನಿ ಅಸೋಸಿಯೇಷನ್ (ರಿ) ಹೆಬ್ಬಾಳ, ಬೆಂಗಳೂರು ಹಾಗೂ ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಅವರ ಕೃಷಿ ಶಿಕ್ಷಣ ಮತ್ತು ಕೃಷಿ ಕ್ಷೇತ್ರದ ಅವಕಾಶಗಳ ವಿಚಾರಂಣ ಸಂಕೀರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಹೌಸಿಂಗ್ ಬೋರ್ಡ್ನಲ್ಲಿ ಆಯೋಜಿಸಲಾಗಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣದ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.15 ಗಂಟೆಗೆ ಕಾರಿಮನೆ ಗೇಟ್ ಬಳಿ ಮೂಡ ಮಂಡ್ಯ ಅವರು ನಿರ್ಮಿಸಿರುವ ಅಂಗಡಿ ಮಳಿಗೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ತ್ರೈಮಾಸಿಕ ಮಾಸಿಕ ಪ್ರಗತಿ ಪರೀಶಿಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನಗೆ ಸಂಬಂಧ ಪಟ್ಟ ಸಭೆ ನಡೆಸಲಿದ್ದಾರೆ.
ಫೆಬ್ರವರಿ 19 ರಂದು ಬೆಳ್ಳಗೆ 8:30 ಗಂಟೆಗೆ ನಾಗಮಂಗಲ ತಾಲ್ಲೂಕಿನ ಚಿಣ್ಯ ರೈತಸಂಪರ್ಕ ಕೇಂದ್ರ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳ್ಳಿಗೆ 9 ಗಂಟೆಗೆ ನಾಗಮಂಗಲ ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿ.ಜಿ.ಎಸ್ ಸಭಾ ಭವನದಲ್ಲಿ ವಿಜ್ಙಾತಂ ಉತ್ಸವದ ವಸ್ತು ಪ್ರದರ್ಶನ ಹಾಗೂ ವಿಶೇಷ ಉಪನ್ಯಾಸಗಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪಲಿದ್ದಾರೆ ಎಂದು ಸಚಿವರು ಆಪ್ತ ಕಾರ್ಯದರ್ಶಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




