Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಗ್ರಾಮ ಆಡಳಿತ ಅಧಿಕಾರಿಗಳ ಧರಣಿಗೆ ಸುರೇಶಗೌಡ ಬೆಂಬಲ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಾಗಮಂಗಲದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ರಾಜ್ಯ ವ್ಯಾಪ್ತಿ ನಡೆಸುತ್ತಿರುವ ಪ್ರತಿಭಟನೆಗೆ ಇಂದು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜೆಡಿಎಸ್ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ನೌಕರರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ನೈತಿಕ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಗಮಂಗಲ ಗ್ರಾಮ ಆಡಳಿತ ಅಧಿಕಾರಿಗಳ ಮೌನ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಒಡೆದು ಹಾಳುವ ನೀತಿಯಿಂದ ಇಂತಹ ಪರಿಸ್ಥಿತಿಗಳು ಒದಗಿ ಬಂದಿದೆ. ಸಾರ್ವಜನಿಕರ ಮತ್ತು ಸರ್ಕಾರಕ್ಕೆ ಕೊಂಡಿಯಾಗಿ ಗ್ರಾಮ ಆಡಳಿತ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಇರುವುದು ದುರಂತವೇ ಆಗಿದೆ ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡ, ಪುರಸಭೆ ಸದಸ್ಯ ಚೆನ್ನಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಪ್ರಶಾಂತ್ ಬಾಬು, ವಿನಯ್ ಕುಮಾರ್, ಸಾಮಕಹಳ್ಳಿ, ಆಶೋಕ, ಗಂಗವಾಡಿ, ಪುಟ್ಟಸ್ವಾಮಿ ಹಲವಾರು ಮುಖಂಡರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ