Saturday, November 21, 2026

ಪ್ರಾಯೋಗಿಕ ಆವೃತ್ತಿ

ಜ್ಞಾನವಂತರಾಗಿ ಸಾರ್ಥಕ ಜೀವನ ನಡೆಸಬೇಕು – ನಿಶ್ಚಲಾನಂದನಾಥಶ್ರೀ

ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿಧ್ಯಾಭ್ಯಾಸ ಮಾಡಿ ಜ್ಞಾನವಂತರಾಗಿ ಸಾರ್ಥಕ ಜೀವನ ನಡೆಸಬೇಕೆಂದು ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮದ್ದೂರು ತಾಲ್ಲೂಕಿನ ಚಂದೂಪುರ ಗ್ರಾಮದ ಡಿ ಕೆ ಗೌಡ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗು ಕಿಡ್ಸ್ ಆರ್ಕ್ ಇಂಟರ್ ನ್ಯಾಷನಲ್ ಶಾಲಾ ವಾರ್ಷಿಕೊತ್ಸವ ಸಮಾರಂಭದ ಭಾಗವಹಿಸಿ ಅವರು ಮಾತನಾಡಿದರು.

ವಿಧ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮದ ಮೂಲಕ ಮಹತ್ ಸಾಧನೆಗೆ ಮುಂದಾಗಬೇಕು, ರೂಢಿಗತ ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ರೂಡಿಸಿಕ್ಕೊಳ್ಳಬೇಕು, ಇದಕ್ಕಾಗಿ ಮಹಾನ್ ವ್ಯಕ್ತಿಗಳ ಆದ್ಯಯನ ಮಾಡಬೇಕು, ಈ ನಿಟ್ಟಿನಲ್ಲಿ ಶ್ರೀ ಸ್ವಾಮಿ ವಿವೇಕಾನಂದರು ಯುವಜನರಿಗೆ ಪ್ರೇರಣೆ ಆಗಬೇಕು ಎಂದರು.

ವಿಶ್ವೇಶ್ವರಯ್ಯ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಚಂದೂಪುರ ಶಿವಲಿಂಗೇಗೌಡ ಮಾತನಾಡಿ, ಗುರು ಹಿರಿಯರ ಬಗ್ಗೆ ಭಕ್ತಿ ಗೌರವ ಬೆಳೆಸಿಕ್ಕೊಳ್ಳಬೇಕೆಂದರು.

ನಿವೃತ್ತ ಪ್ರಾಂಶುಪಾಲರಾದ ಡಾ.ಬಿ ಕೃಷ್ಣಪ್ಪ  ಸಮರೋಪ ನುಡಿಗಳನ್ನಾಡಿ, ತಾಲ್ಲೂಕು
ಕೇಂದ್ರಗಳಿಂದ ದೂರ ಇರುವಾ ಮೂಲಭೂತ ಸೌಕರ್ಯಗಳ ಕೊರತೆಯಿರುವ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸ್ಥಳೀಯವಾಗಿಯೇ ಶೈಕ್ಷಣಿಕ ಸೌಲಭ್ಯ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿವಲಿಂಗ ಶಿವಚಾರ್ಯ ಸ್ವಾಮಿಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬೆಂಗಳೂರಿನ ಕಿಡ್ಸ್ ಆರ್ಕ್ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲರು ಉಪಸ್ಥಿತರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ