Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರದ ಮಹತ್ವದ ನಿರ್ಧಾರ | ‘ಅನ್ನಭಾಗ್ಯ’ ಯೋಜನೆಯಡಿ ತಲಾ10 ಕೆ.ಜಿ ಅಕ್ಕಿ ವಿತರಣೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿಯನ್ನೇ ಕೊಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ.

ಬೆಂಗಳೂರು ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್‌ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದ್ದೇವೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್‌ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ