ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದಲ್ಲಿ 25 ಲಕ್ಷ ರೂ.ವೆಚ್ಚದ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಜಾನುವಾರು ತಪಾಸಣೆಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಇಂದು ಗುದ್ದಲಿ ಪೂಜೆ ಮಾಡಿದ್ದೇನೆ. ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಿದ್ದು,ಶೀಘ್ರವಾಗಿ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದರು.
ಪಶು ಸಂಗೋಪನೆ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಡಾ.ಕೆ.ಎಂ.ಸುರೇಶ್ ಮಾತನಾಡಿ, ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಚಾಲನೆ ನೀಡಿದ್ದು ಆರು ತಿಂಗಳಿಂದ ಒಂದು ವರ್ಷದೊಳಗೆ ಕಟ್ಟಡವನ್ನು ಪೂರ್ಣಗೊಳಿಸುತ್ತೇವೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ.
ಪಶು ಚಿಕಿತ್ಸಾಲಯದ ಕಟ್ಟಡ ಪೂರ್ಣಗೊಂಡು ಜನತೆಗೆ ಬಳಕೆಯಾಗಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ತೇಜ ತ್ರಿಲೋಕ್, ಮುಖ್ಯ ಶಿಕ್ಷಕಿ ಮಂಗಳಾ, ಗುತ್ತಿಗೆದಾರ ನಾಗರಾಜು ಮುಖಂಡ ಸಿದ್ದೇಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.




