ಮಂಡ್ಯ ತಾಲ್ಲೂಕಿನ ಸಂತೆಕಸಲಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಫೆ. 22ರಂದು ಬೆಳಿಗ್ಗೆ 10 ಗಂಟೆಗೆ ‘ ಜನಪದ ಸುಗ್ಗಿ’ ಕಾರ್ಯಕ್ರಮ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಪಾಚಾರ್ಯ ಎನ್.ಸಿ. ಮಹೇಂದ್ರ ಅಧ್ಯಕ್ಷತೆ ವಹಿಸುವರು.
ಎಸ್.ರಾಜಣ್ಣ ಮತ್ತು ಸಂತೆಕಸಲಗೆರೆ ಬಸವರಾಜು ತಂಡದವರಿಂದ ಸುಗಮ ಸಂಗೀತ ಬಸವರಾಜು ಮತ್ತು ತಂಡದವರಿಂದ ಮೂಲದಾಟಿ ಜನಪದ ಕಾರ್ಯಕ್ರಮಗಳು ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಡಾ.ಬಿ.ವಿ.ನಂದೀಶ್, ಮುಖ್ಯ ಶಿಕ್ಷಕ ಎಸ್.ಕೆ. ನಶೀರ್ ಹುಸೇನ್, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಯೋಗೀಶ್, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಎಲ್ ಸಂದೇಶ್ ಭಾಗವಹಿಸುವರು.




