Friday, November 20, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ರೈತನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಚಿರತೆ

ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಬಳಿ ತನ್ನ ಜಮೀನಿಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಕೆಸ್ತೂರು ಗ್ರಾಮದ ರೈತ ರಾಮು ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ರೈತ. ತನ್ನ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ಈತನ ಮೇಲೆ ಚಿರತೆ ದಾಳಿ ಮಾಡಿದ್ದು, ಬೆನ್ನು ಮತ್ತು ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗಳಾಗಿವೆ.

ಗಾಯಗೊಂಡ ರೈತನನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈತ ರಾಮು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ