Friday, November 20, 2026

ಪ್ರಾಯೋಗಿಕ ಆವೃತ್ತಿ

ಒಂದು ವಾರದಲ್ಲಿ ಖಾತೆಗಳಿಗೆ ಗೃಹಲಕ್ಷ್ಮಿ ಹಣ ; ಲಕ್ಷ್ಮಿ ಹೆಬ್ಬಾಳ್ಕರ್

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದರು.

ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ