Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ : ಪುಡಿ ರೌಡಿಗೆ ಪೊಲೀಸರ ಗುಂಡೇಟು

ಇತ್ತೀಚಿಗೆ ಮಚ್ಚು ಹಿಡಿದು ಕೊಂಡು ವ್ಯಕ್ತಿಯೊಬ್ಬನಿಗೆ ಬೆದರಿಕೆ ಹಾಕಿದ್ದ ಪುಡಿ ರೌಡಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸುಭಾಷ್‌ ಅಲಿಯಾಸ್ ಸುಬ್ಬು ಎಂಬುವನ ಮೇಲೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ಕಾಲಿಗೆ ಗುಂಡೇಟು ಹೊಡೆದಿದ್ದಾರೆ.

ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸುಬ್ಬುವನ್ನು ಬಂಧಿಸಲು ಪೊಲೀಸರು ಯತ್ನ ನಡೆಸಿದಾಗ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಮಂಡ್ಯ ಪೂರ್ವ ಠಾಣೆಯ ಪಿಎಸ್‌ಐ ಶೇಷಾದ್ರಿ ಕುಮಾ‌ರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿದಿದ್ದಾರೆ.

ಗಾಯಾಳು ಆರೋಪಿಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ