Saturday, November 21, 2026

ಪ್ರಾಯೋಗಿಕ ಆವೃತ್ತಿ

ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆ ಬಳಕೆ ; ಕ್ಯಾನ್ಸರ್ ಅಂಶ ಪತ್ತೆ !

ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರವು ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಘೋಷಿಸಿದ್ದಾರೆ.

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಗುಂಡೂರಾವ್ ಹೇಳಿದ್ದಾರೆ.

ಪತ್ತೆಯಾಗಿದ್ದು ಹೇಗೆ ?

ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವುಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್​ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ