Friday, November 20, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರು ಅಪಘಾತ

ಚಿಕ್ಕಮಗಳೂರು ಬಳಿ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದ್ದರಿಂದ ಕಾರು ಜಖಂಗೊಂಡಿರುವ ಘಟನೆ ಕಳೆದ ತಡ ರಾತ್ರಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ  ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ ಪಾರಾಗಿದ್ದಾರೆ.

ಲಾರಿ ಚಾಲಕನ ಬಂಧನ

ಸದ್ಯ ಪೊಲೀಸರು ಅಪಘಾತ ಮಾಡಿದ ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ