Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಪಘಾತದಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಮನು ಸಾವು

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಬೋರಾಪುರ ಗ್ರಾಮದ ಬಳಿ ಶನಿವಾರ  ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಹಿರಿಯ ಪತ್ರಕರ್ತ ಹರವು ದೇವೇಗೌಡ ಅವರ ಅಳಿಯ, ಸಾಪ್ಟ್ ವೇರ್ ಇಂಜಿನಿಯರ್ ಮನು (36) ಸಾವಿಗೀಡಾಗಿದ್ದಾರೆ.

ಟಾಟಾ ನಿಕ್ಸಾನ್ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಮೃತ ವಿ.ಮನು ಅವರು ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿಯಾಗಿದ್ದು, ಕೆ.ಎಂ.ದೊಡ್ಡಿಯ  ವೆಂಕಟೇಶ್ ಅವರ ಪುತ್ರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಬೆಂಗಳೂರಿನಿಂದ ತಮ್ಮ ಸ್ವಗ್ರಾಮ ಕೆ.ಎಂ.ದೊಡ್ಡಿಗೆ ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮಳವಳ್ಳಿಯಿಂದ ಮದ್ದೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ. ಬಸ್‌ನ ಮುಂಭಾಗದ ಚಕ್ರ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿ ಕಾರಿಗೆ ಬಂದು ಹೊಡೆದಿದ್ದರಿಂದ, ಮನು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಮದ್ದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯ ಅವರು ಕೊನೆಯುಸಿರೆಳೆದರು. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ