ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
हरियाणा में कानून व्यवस्था ध्वस्त! कांग्रेस कार्यकर्ता व अभिनेत्री हिमानी नरवाल का शव सूटकेस में मिला।
“बेटी बचाओ” सिर्फ़ नारा, हकीकत में बेटियाँ असुरक्षित! भाजपा सरकार कब जागेगी? #JusticeForHimaniNarwal #हरियाणा_असुरक्षित pic.twitter.com/dUUD67Y0mK— Pratish Tiwari (@tiwari_pratish) March 1, 2025
“>
ಬಸ್ ನಿಲ್ದಾಣದ ಬಳಿ ಪತ್ತೆಯಾದ ಸೂಟ್ಕೇಸ್ನಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್ಕೇಸ್ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್ ಪಿಜಿಐಎಂಎಸ್ಗೆ ರವಾನಿಸಲಾಗಿದೆ.




