Monday, November 23, 2026

ಪ್ರಾಯೋಗಿಕ ಆವೃತ್ತಿ

ರಾಷ್ಟೀಯ ಕಾಂಗ್ರೆಸ್ ಸೇವಾದಳ ಪಕ್ಷದ ಮುಂಚೂಣಿ ಘಟಕ ; ಗಂಗಾಧರ್

ಕಾಂಗ್ರೆಸ್ ಸೇವಾದಳ ರಾಷ್ಟೀಯ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕವಾಗಿ ಸ್ವಯಂ ಸೇವಕ ಸಂಸ್ಥೆಯಾಗಿ ಸೇವೆ ಸಲ್ಲಿಸುತ್ತಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಮಂಡ್ಯನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸೇವಾದಳದ ನೂತನ ಅಧ್ಯಕ್ಷರಾಗಿ ಬಿ.ಆರ್.ಕೃಷ್ಣೇಗೌಡ ಮತ್ತು ಜಿಲ್ಲಾ ಮಹಿಳಾ ಅಧ್ಯಕ್ಷರಾಗಿ ಕಮಲರಾಜ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮರ್ಪಕವಾಗಿ ಜಿಲ್ಲಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುವಂತೆ ತಿಳಿಸಿದರು.

ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಕೀಲಾರ ರಾಧಾಕೃಷ್ಣ ಮಾತನಾಡಿ ಅತಿ ಶೀಘ್ರವಾಗಿ ಜಿಲ್ಲಾ ಪಂಚಾಯತ್ ಹಾಗು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಬರುತ್ತಿದ್ದು ಬೇರು ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕಾಂಗ್ರೆಸ್ ಕಾರ್ಯ ಕರ್ತರು ಮುಂದಾಗಬೇಕು ಎಂದು ಹೇಳಿದರು.

ಕೇರಳ ರಾಜ್ಯದ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷದ ಚಿಹ್ನೆ ನೀಡಲು ಸರ್ಕಾರ ಚಿಂತನೆ ಮಾಡುತ್ತಿದೆ.ಮುಂಚೂಣಿ ಘಟಕದ ಎಲ್ಲಾ ಕಾಂಗ್ರೆಸ್ ವಿಭಾಗಗಳು ಕಾಂಗ್ರೆಸ್ ಸರ್ಕಾರವಿದೆ ಎಲ್ಲಾ ಕಡೆ ಪಕ್ಷ ಸಂಘಟನೆಯನ್ನು ಬಲಪಡಿಸಿ ನಿಷ್ಠೆಯಿಂದ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕೆಲಸ ಮಾಡಿ ಎಂದರು.

ಮುಂಬರುವ 2028 ರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಲ್ಲರಿಗೂ ಅವಕಾಶಗಳು ಸಿಗುತ್ತವೆ ಆದ್ದರಿಂದ ಪ್ರತಿಯೊಬ್ಬರು ಪಕ್ಷ ಸಂಘಟನೆಗೆ ಮುಂದಾಗಿ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಸರಾಳು ಕೃಷ್ಣೇಗೌಡ ಮಾತನಾಡಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಬ್ಲಾಕ್ ಸಮಿತಿಗಳ ರಚನೆ ಮಾಡುತ್ತಿದ್ದು ಎಲ್ಲರೂ ಸಹಕಾರ ಕೊಡಬೇಕು. ಜಿಲ್ಲೆಯಲ್ಲಿ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಕೆಲಸ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಅಪ್ಪಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ರುದ್ರಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಕ್ಕಬಳ್ಳಿ ಕೃಷ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ನಾಗರಾಜು, ಮದ್ದೂರು ತಾಲೂಕು ಕಾಂಗ್ರೆಸ್ ಸೇವಾದಳ ಅಧ್ಯಕ್ಷೆ ಕಲ್ಪನಾ, ಮಂಡ್ಯ ಸಿಟಿ ಅಧ್ಯಕ್ಷೆ ಪದ್ಮ, ಉಪಾಧ್ಯಕ್ಷ ನಾಸಿನ್, ಜೆ.ಕೃಷ್ಣ,ಸಿದ್ದಯ್ಯ,ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ