Thursday, November 19, 2026

ಪ್ರಾಯೋಗಿಕ ಆವೃತ್ತಿ

ಸರ್ವ ಜನಹಿತ, ಅಭಿವೃದ್ದಿಪರ ರಾಜ್ಯ ಬಜೆಟ್ ; ದಿನೇಶ್ ಗೂಳಿಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟದ 7 ಕೋಟಿ ಜನರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಅಭಿವೃದ್ಧಿ, ಹಳೆ ಮೈಸೂರು ಭಾಗಕ್ಕೆ ಒತ್ತು. ಉತ್ತರ ಕರ್ನಾಟಕ ಭಾಗಕ್ಕೆ ಕೈಗಾರಿಕೆಗಳುನ್ನು ನೀಡಿದ್ದಾರೆ. ಕೃಷಿಗೆ ಅಗ್ರ ತಾಂಬೂಲ ಕೊಟ್ಟಿರುವುದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿರುವುದು ಎಲ್ಲ ಸಮುದಾಯವನ್ನು ಗಮನದಲ್ಲಿರಿಸಿಕೊಂಡು ಬಜೆಟ್‌ ರೂಪಿಸಿರುವುದು ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗೆ 51 ಸಾವಿರ ಕೋಟಿ, ಕೃಷಿ ಕ್ಷೇತ್ರಕ್ಕೆ 51 ಸಾವಿರ ಕೋಟಿ, ಬೆಂಗಳೂರು ಮಹಾ ನಗರದ ಸಂಚಾರಿ ದಟ್ಟಣೆ ಕಡಿಮೆ ಮಾಡಲು ಸುರಂಗ ಮಾರ್ಗ ನಿರ್ಮಾಣಕ್ಕೆ 40 ಸಾವಿರ ಕೋಟಿ ರೂ.ಗಳನ್ನು ಮಾನ್ಯ ಮುಖ್ಯಮಂತ್ರಿಗಳು ಮೀಸಲಿಟ್ಟಿದ್ದಾರೆ. ಹೆಚ್ಚು ವಿತ್ತೀಯ ಕೊರತೆಯಾಗದಂತೆ ನಿಗದಿತ ಸಾಲ ಮಿತಿಯಲ್ಲಿ ಬಜೆಟ್‌ ಮಂಡಿಸಿದ್ದಾರೆ. ಬಜೆಟ್ ಅಭಿವೃದ್ಧಿ ಪರವಾಗಿದೆ. ಆದರ್ಶವಾದ, ಸರ್ವಜನ ಹಿತದ ಬಜೆಟ್‌ ಆಗಿದೆ. ಜನಪ್ರಿಯ ಯೋಜನೆಗಳಿಗೆ ಮಾತ್ರವಲ್ಲದೇ ಅಭಿವೃದ್ಧಿ ಕೇಂದ್ರಿತವಾಗಿ ಹಣ ಹಂಚಿಕೆ ಮಾಡಲಾಗಿರುವುದು ಸ್ವಾಗತಾರ್ಹ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ