Friday, November 20, 2026

ಪ್ರಾಯೋಗಿಕ ಆವೃತ್ತಿ

ಎಲ್ಲಾ ಜಾತಿ, ಜನಾಂಗದ ಆಶೋತ್ತರಗಳಿಗೆ ಸ್ಪಂದಿಸಿದ ಬಜೆಟ್ : ದೀಪಕ್

2025-26ನೇ ಸಾಲಿನಲ್ಲಿ ರಾಜ್ಯದ ಬಜೆಟ್ ಗಾತ್ರ ಗಾತ್ರ 4.9 ಲಕ್ಷ ಕೋಟಿ ಇದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಸಮಾಜದ ಎಲ್ಲಾ ಜಾತಿ, ಜನಾಂಗ ವರ್ಗದ ಜನರ ಆಶೋತ್ತರಗಳನ್ನು ಆಲಿಸಿ ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಮಾಡಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ದೀಪಕ್ ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಎಲ್ಲಾ ಇಲಾಖೆಯ ಸಚಿವರು, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ರೈತರು, ಶೋಷಿತರು, ಅಲ್ಪಸಂಖ್ಯಾತ, ಹಿಂದುಳಿದವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ಮಠಾಧೀಶರೊಂದಿಗೆ ಸುದೀರ್ಘ ಸಭೆ ನಡೆಸಿ ಈ ಬಜೆಟ್ ಮಂಡಿಸಿ, ಎಲ್ಲ ಜಾತಿ, ಜನಾಂಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದ್ದಾರೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಹುತೇಕ ಎಲ್ಲಾ ಇಲಾಖೆಗಳು ಮತ್ತು ಎಲ್ಲಾ ಸಮುದಾಯಗಳ ಜನರ ಬದುಕನ್ನು ಗಮನದಲ್ಲಿಟ್ಟುಕೊಂಡು ನೀಡಲಾಗಿರುವ ಈ ಬಜೆಟ್ ಶಿಕ್ಷಣ, ಆರೋಗ್ಯ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭೀವೃದ್ಧಿ, ಕೃಷಿ, ಸಹಕಾರ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿದಂತೆ ಇನ್ನಿತರ ಐಟಿ, ಬಿಟಿ ಕ್ಷೇತ್ರಗಳಿಗೂ ಕೂಡ  ಆದ್ಯತೆ ನೀಡಿದೆ. ಈ ಬಜೆಟ್‌ನಲ್ಲಿ ಶ್ರಮಿಕ ವರ್ಗಕ್ಕೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರು ಎಂದರೆ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನರು, ಬೌದ್ಧರು, ಈ ಎಲ್ಲಾ ಸಮುದಾಯಗಳು ಬರುತ್ತವೆ. ರಾಜ್ಯದ ಬಜೆಟ್ ಗಾತ್ರ 4.9 ಲಕ್ಷ ಕೋಟಿ ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡಿದ್ದೂ ರೂ. 4,500 ಕೋಟಿ ಇದನ್ನು ವಿರೋಧ ಪಕ್ಷದವರು ಅಲಾಲ್ ಬಜೆಟ್, ಓಲೈಕೆ ಬಜೆಟ್ ಎನ್ನುವ ಬಿಜೆಪಿ ನಾಯಕರಿಗೆ ಮಾನ-ಮಾರ್ಯಾದೆ ಇಲ್ಲ ಎಂದು ಅವರು ಟೀಕಿಸಿದ್ದಾರೆ.  ಹಾಗೂ ಮಂಡ್ಯ ಜಿಲ್ಲಾ ಮಾಧ್ಯಮ ವಕ್ತಾರರಾದ ಕೆ.ಎನ್.ದೀಪಕ್‌ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಂದನೆಗಳೊಂದಿಗೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ