Thursday, November 19, 2026

ಪ್ರಾಯೋಗಿಕ ಆವೃತ್ತಿ

ರಕ್ತವನ್ನು ಔಷಧವೆಂದೇ ಪರಿಗಣಿಸಲಾಗುತ್ತಿದೆ ; ಡಾ.ಮೀರಾಶಿವಲಿಂಗಯ್ಯ

ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಠ ದಾನವಾಗಿದೆ. ರಕ್ತವನ್ನು ಔಷಧಿ ಎಂದು ಪರಿಗಣಿಸಲಾಗುತ್ತಿದೆ. ರಕ್ತದಾನ ಶಿಬಿರವು ಮಾನವೀಯ ಮೌಲ್ಯವನ್ನು ಬಿತ್ತುವುದಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಅವಶ್ಯಕತೆ ತಕ್ಕಂತೆ ರಕ್ತ ಸಿಗುತ್ತಿಲ್ಲ, ಆದ್ದರಿಂದ ರಕ್ತದಾನ ಮಾಡುವವರ ಹೆಚ್ಚಳವಾಗಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷರಾದ ಡಾ.ಮೀರಾ ಶಿವಲಿಂಗಯ್ಯ ಹೇಳಿದರು.

ಮಂಡ್ಯತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ (ಸಿದ್ದಯ್ಯನ ಕೊಪ್ಪಲು ಗೇಟ್ ಸಮೀಪ) ಸಭಾಂಗಣದಲ್ಲಿ ಕಾವೇರಿ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಕ್ತದಾನದಿಂದ ಭಾತೃತ್ವ ಭಾವನೆ ಬೆಳೆಯುತ್ತದೆ, ಇದರಿಂದ ಸಂಬಂಧಗಳು ಬೆಳೆಯುತ್ತದೆ. ಜಾತಿ, ಧರ್ಮಗಳನ್ನು ಮೀರಿದ್ದು ರಕ್ತದಾನವಾಗಲಿದೆ. ಒಂದು ಯುನಿಟ್ ರಕ್ತದಿಂದ ಮೂರ್‍ನಾಲ್ಕು ಜನರಿಗೆ ಅನುಕೂಲವಾಗಲಿದೆ ಎಂದರು.

ಅಲಯನ್ಸ್ ಕ್ಲಬ್ ರಾಜ್ಯ ಕೆ.ಟಿ.ಹನುಮಂತು ಮಾತನಾಡಿ, ದೇಶದಲ್ಲಿ 143 ಕೋಟಿ ಜನಸಂಖ್ಯೆ ಇದೆ, ದೇಶದಲ್ಲಿ ಪ್ರತಿನಿತ್ಯ 38 ಸಾವಿರ ಯನಿಟ್ ರಕ್ತದ ಅವಶ್ಯಕತೆ ಇದೆ. ಆದ್ರೆ ನಮಗೆ ಸಿಗುತ್ತಿರುವ ರಕ್ತದ ಪ್ರಮಾಣ 20 ರಿಂದ 22 ಸಾವಿರ ಯುನಿಟ್ ಗಳು ಮಾತ್ರ, ಆದ್ದರಿಂದ ಇನ್ನು ಹೆಚ್ಚಿನ ರಕ್ತದಾನದ ಅವಶ್ಯಕತೆ ಇದೆ. ಎಷ್ಟೋ ಜನ ಸರಿಯಾದ ಕಾಲಕ್ಕೆ ರಕ್ತ ಸಿಗದೇ ಸಾವಿಗೀಡಾಗುತ್ತಿದ್ದಾರೆ. ಆದ್ದರಿಂದ ರಕ್ತದಾನಿಗಳ ಸಂಖ್ಯೆ ಹೆಚ್ಚಳವಾಗಬೇಕಿದೆ ಎಂದರು.

ಕಾಲೇಜಿನ ಅಧ್ಯಕ್ಷ ಡಾ. ಎಚ್.ಪಿ. ರಾಜು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕಾರ್ಯದರ್ಶಿ ಪ್ರೊ. ಟಿ. ನಾಗೇಂದ್ರ, ಪ್ರಾಂಶುಪಾಲ ಪ್ರೊ. ಎ.ಎಸ್. ಶ್ರೀಕಂಠಪ್ಪ, ಉಪಪ್ರಾಂಶುಪಾಲಪ್ರೊ. ಮಂಜುನಾಥ್, ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ಡಾ. ಆರತಿ, ಡಾ.ಎ.ಪಿ. ಸವಿತಾ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಸೇರಿದಂತೆ ಸಿಬ್ಬಂದಿ ವರ್ಗದವರೆಲ್ಲರೂ ಸಹ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ