Tuesday, November 24, 2026

ಪ್ರಾಯೋಗಿಕ ಆವೃತ್ತಿ

ಹಿಂದಿ ಹೇರಿಕೆ ವಿರುದ್ದ ಆಕ್ರೋಶ | ರೂಪಾಯಿ ಚಿಹ್ನೆ ‘₹’ ಬಳಕೆಯನ್ನು ಕೈಬಿಟ್ಟ ತಮಿಳುನಾಡು

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ದ ಸಿಡಿದೆದ್ದಿರುವ ತಮಿಳುನಾಡು ಸರ್ಕಾರವು ರೂಪಾಯಿ ಚಿಹ್ನೆ (₹) ಅನ್ನು ಬಳಸುವುದನ್ನು ಕೈ ಬಿಟ್ಟಿದ್ದು, ಬದಲಾಗಿ ತಮಿಳು ಅಕ್ಷರ ‘ರೂಬಾಯಿ’ ಮೊದಲ ಅಕ್ಷರ ‘ರೂ’ ಅನ್ನು ಬಳಸಿದೆ.

2025-26 ಬಜೆಟ್ ಪ್ರತಿಯಲ್ಲಿ ತಮಿಳುನಾಡು ಸರ್ಕಾರ ಹಣಕಾಸು ಸಚಿವ ತಂಗಂ ತೆನ್ನರಸು ನಾಳೆ (ಮಾ.14) ಬಜೆಟ್ ಮಂಡಿಸಲಿದ್ದು, ಬಜೆಟ್ ಪ್ರತಿಯಲ್ಲಿ ರೂಪಾಯಿ ಎಂದು ಉಲ್ಲೇಖಿಸುವ ಕಡೆಗಳಲ್ಲಿ ತಮಿಳು ಅಕ್ಷರವನ್ನೇ ಬಳಕೆ ಮಾಡಲಾಗಿದೆ.

ಈ ಬಗ್ಗೆ ಡಿಎಂಕೆ ನಾಯಕ ಸರವಣನ್ ಅಣ್ಣಾದೊರೈ ಅವರು, “ಇದರಲ್ಲಿ ಕಾನೂನುಬಾಹಿರ ಏನೂ ಇಲ್ಲ … ಇದು ಕೇಂದ್ರದೊಂದಿಗೆ ‘ಘರ್ಷಣೆ’ ಅಲ್ಲ. ನಾವು ತಮಿಳಿಗೆ ಆದ್ಯತೆ ನೀಡುತ್ತೇವೆ … ಅದಕ್ಕಾಗಿಯೇ ಸರ್ಕಾರ ಇದನ್ನು ಮುಂದುವರಿಸಿದೆ” ಎಂದು ತಿಳಿಸಿದ್ದಾರೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ  Xನಲ್ಲಿ ಪೋಸ್ಟ್ ನಲ್ಲಿ,  “2025-26ರ ಡಿಎಂಕೆ ಸರ್ಕಾರದ ರಾಜ್ಯ ಬಜೆಟ್ ಮೇಲೆ ತಮಿಳನೊಬ್ಬ ವಿನ್ಯಾಸಗೊಳಿಸಿದ ರೂಪಾಯಿ ಚಿಹ್ನೆಯನ್ನು ಬಳಸಲಾಗಿದೆ. ರೂಪಾಯಿ ಲೋಗೋವನ್ನು ಇಡೀ ಭಾರತ ಅಳವಡಿಸಿಕೊಂಡಿದೆ ಮತ್ತು ನಮ್ಮ ಕರೆನ್ಸಿಯಲ್ಲಿ ಅದನ್ನು ಸೇರಿಸಲಾಗಿದೆ. ಈ ಚಿಹ್ನೆಯನ್ನು ವಿನ್ಯಾಸಗೊಳಿಸಿದ ತಿರು ಉದಯ್ ಕುಮಾರ್, ಮಾಜಿ ಡಿಎಂಕೆ ಶಾಸಕರ ಮಗ ಎಂದು ಉಲ್ಲೇಖಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ