Friday, November 20, 2026

ಪ್ರಾಯೋಗಿಕ ಆವೃತ್ತಿ

ರೆಡ್ ಕ್ರಾಸ್ ಮಾನವೀಯ ಮೌಲ್ಯ ಎತ್ತಿ ಹಿಡಿಯುವ ಸಂಸ್ಥೆ: ಡಾ.ಕುಮಾರ

ರೆಡ್ ಕ್ರಾಸ್ ಸಂಸ್ಥೆ ಲಾಭ ಗಳಿಸುವ ಸಂಸ್ಥೆಯಲ್ಲ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ಸಂಸ್ಥೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ನಗರದ ರೆಡ್ ಕ್ರಾಸ್ ಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥದಿಂದ ಸೇವೆ ಮಾಡಬೇಕು ಎಂಬ ಮನೋಭಾವ ಇಟ್ಟುಕೊಂಡು ಬರುವವರು ಇಲ್ಲಿ ಸದಸ್ಯರಾಗಿ ಕೆಲಸ ಮಾಡುತ್ತಾರೆ ಲಾಭ ಇದೆ ಎಂದು ಯಾರೂ ಬರಲ್ಲ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಗೆ ಸದಸ್ಯರಾಗಿ ಮಾನವೀಯ ಮೌಲ್ಯಗಳನ್ನು, ನಿಸ್ವಾರ್ಥ ಸೇವೆ, ಸಮಾಜ ಸೇವೆ, ತಾಳ್ಮೆ,ಸಹನೆ ಎಲ್ಲವನ್ನು ಗುಣಗಳಾ ಗಿರುವ ಸಂಸ್ಥೆ ರೆಡ್ ಕ್ರಾಸ್ ಸಂಸ್ಥೆ ಎಂದರು.

ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಮಹತ್ವದ ಬಗ್ಗೆ ತಿಳಿಸಬೇಕು,ಯಾವ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ದೊಡ್ಡದು ಎನ್ನುವುದು ಎಲ್ಲರಿಗೂ ತಿಳಿದಿದೆ.ಕೋವಿಡ್ ಸಂದರ್ಭದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕೆಲಸ ಎಲ್ಲರಿಗೂ ಗೊತ್ತಿದೆ. ನೂರು ವರ್ಷಗಳ ಇತಿಹಾಸವಿರುವ ಬಲವನ್ನು ಹೊಂದಿರುವ ರೆಡ್ ಕ್ರಾಸ್ ಸಂಸ್ಥೆಯನ್ನು ಸದೃಢವಾಗಿ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

ರೆಡ್ ಕ್ರಾಸ್ ಸಂಸ್ಥೆಗೆ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಾಗ ವಿಶೇಷ ಒತ್ತು ನೀಡಿದಂತಾಗುತ್ತದೆ. ಎಲ್ಲರೂ ಕೂಡ ಬೆಂಬಲ ಕೊಟ್ಟರೆ ಒಳ್ಳೆಯ ಕೆಲಸ ಮಾಡಲು ಸಾಧ್ಯ. ಇನ್ನು ಹೆಚ್ಚು ಹೆಚ್ಚು ಸದಸ್ಯರಾಗುವ ಮೂಲಕ ಎಲ್ಲರೂ ಕೂಡ ಒಮ್ಮನಸ್ಸಿನಿಂದ ಕೈಜೋಡಿಸಿ ತಂಡದ ರೀತಿ ಕೆಲಸ ಮಾಡಬೇಕು ಎಂದು ಹೇಳಿದರು.

ಮಂಡ್ಯ ರೆಡ್ ಕ್ರಾಸ್ ಸಂಸ್ಥೆಗೆ ಪ್ರತ್ಯೇಕವಾದ ಬ್ಲಡ್ ಬ್ಯಾಂಕ್ ಇದ್ದರೆ ಅದರ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ರಕ್ತದಾನ ಶಿಬಿರಗಳನ್ನು ಮಾಡಲು ಕ್ರಮವಹಿಸಿ ಎಂದು ತಿಳಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಹೆಚ್ಚು ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಹೆಚ್ಚು ರಕ್ತ ಚೀಲಗಳನ್ನು ನೀಡಿದ ಕಾಲೇಜುಗಳಿಗೆ ಪ್ರಶಸ್ತಿ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮಂಡ್ಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿ ಡಾ.ಕೆ.ಎಂ. ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ