Sunday, November 22, 2026

ಪ್ರಾಯೋಗಿಕ ಆವೃತ್ತಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಯುವ ಮುಖಂಡನ ಬಂಧನ

7 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಬಿಜೆಪಿ ಯುವ ಮುಖಂಡನನ್ನು ಬಂಧಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ