ಮಂಡ್ಯ ಲೋಕಸಭೆ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು.
ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಗಡ್ಕರಿ ಅವರೊಂದಿಗೆ ಚರ್ಚಿಸಲಾಯಿತು. ನನ್ನ ಮನವಿಗೆ ಮಾನ್ಯ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೋಲಾರ ಸಂಸದ ಮಲ್ಲೇಶ್ ಬಾಬು ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉಪಸ್ಥಿತರಿದ್ದರು.




