ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ಧ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕನ್ನಹಟ್ಟಿ ಹಾಗೂ ಬೀಚನಹಳ್ಳಿ ಗ್ರಾಮದಲ್ಲಿ ಪಡಿತರ ವಿತರಣೆ ಉಪ ಕೇಂದ್ರ ಹಾಗೂ ಸೌದೇನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು, ಪ್ರತಿ ಗ್ರಾಮದಲ್ಲೂ ಪಡಿತರ ವಿತರಣೆಯ ಉಪ ಕೇಂದ್ರಗಳಾಗಬೇಕು ಎಂದು ಹೇಳಿದರು. ವಯಸ್ಸಾದವರು ಬೇರೆ ಕಡೆ ಹೋಗಿ ಹಾಗೂ ಅನೇಕ ಜನರು ಕೆಲಸಕ್ಕೆ ಹೋಗದೆ ಅಕ್ಕಿ ತೆಗೆದುಕೊಳ್ಳ ಬೇಕಾಗುತ್ತದೆ ಅಂತಹ ಸಂದರ್ಭದಲ್ಲಿ ಪ್ರತಿ ಗ್ರಾಮದಲ್ಲೂ ಪಡಿತರ ಉಪ ಕೇಂದ್ರಗಳಾಗಬೇಕು ಆಗ ಜನರಿಗೆ ಅನುಕೂಲವಾಗುತ್ತದೆ ಎಂದರು.
ದುದ್ಧ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲೂ ರಸ್ತೆ ಹಾಗೂ ಚರಂಡಿ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತೇವೆ ಎಂದು ಹೇಳಿದರು.
ಮೇಲುಕೋಟೆ ರಸ್ತೆ ಅಭಿವೃದ್ಧಿ ಕಾಮಗಾರಿ ವೈರಮುಡಿ ಉತ್ಸವದೊಳಗೆ ಮುಗಿದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಆಹಾರ ನಿರೀಕ್ಷಕ ರೇವಣ್ಣ, ದುದ್ದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಶೀಲ್,ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಉದಯ್ ಕುಮಾರ್, ದುದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಬೀಚನಹಳ್ಳಿ ಶಿವಕುಮಾರ್, ಡಿ.ಆರ್.ಸೋಮಶೇಖರ್, ವಿಎಸ್ಎಸ್ಎನ್ ಅಧ್ಯಕ್ಷ ಚೌಡೇಶ್,
ಮುಖಂಡರಾದ ರವಿ,ಅಣ್ಣಯ್ಯ, ರಮೇಶ, ಶಿವಲಿಂಗೇಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.




