ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಮಾ.23ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಎ & ಎ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷದ ಸಭೆ ಅಯೋಜಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆಯಂತೆ ಪಕ್ಷವನ್ನು ಬಲಗೊಳಿಸಲು ‘ಕಾಂಗ್ರೆಸ್ ಸರ್ಕಾರದ ನಡೆ ಜನರ ಕಡೆ’ ಎಂಬ ಘೋಷ ವಾಕ್ಯದೊಂದಿಗೆ ಮಾ.26 ರಿಂದ ಏ.5ರವರೆಗೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಕೇಂದ್ರದಿಂದ ಆರಂಭವಾಗುವ ಕಾರ್ಯಕರ್ತ ಸಭೆ ಮಳವಳ್ಳಿಯಲ್ಲಿ ಮುಕ್ತಾಯವಾಗಲಿದೆ.
ಮಾ.26ರ ಬುಧವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ರವಿಕುಮಾರ್ ಗೌಡ ವಹಿಸುವರು.
ಸಭೆಯಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಾಬು, ಶಾಸಕರಾದ ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೈ ಕಾರ್ಯಕರ್ತರು ಪಾಲ್ಗೊಂಡು ಸಭೆ ಯಶಸ್ವಿಗೊಳಿಸುವಂತೆ ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕರು ಮನವಿ ಮಾಡಿದ್ಧಾರೆ.




