Saturday, November 21, 2026

ಪ್ರಾಯೋಗಿಕ ಆವೃತ್ತಿ

ವೃಕ್ಷ ಸಂರಕ್ಷಣಾ ಕಾಯಿದೆ- 1972ಕ್ಕೆ ತಿದ್ದುಪಡಿ | ಅಕ್ರಮವಾಗಿ ಮರ ಕಡಿದರೆ 10 ಲಕ್ಷ ರೂ. ದಂಡ! :

ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ 1 ಲಕ್ಷ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

“Cutting down large number of trees is like killing human beings, or worse than that” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ.

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ ಎಂಬ ಮಾತಿದೆ. ಈಗ ಇದನ್ನು “ವೃಕೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು. ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ